Monday, Aug 3 2020 | Time 23:17 Hrs(IST)
 • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
 • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
 • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
 • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
 • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
 • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
 • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
 • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
 • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
 • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
 • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
 • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
 • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
 • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
 • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
National Share

‘ನಮ್ಮ ಭೂಪ್ರದೇಶಕ್ಕೆ ಯಾರೊಬ್ಬರೂ ಪ್ರವೇಶಿಸಿಲ್ಲ’ - ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ

ನವದೆಹಲಿ, ಜೂನ್ 19 (ಯುಎನ್‌ಐ)- ಲಡಾಕ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ನಡೆಯುತ್ತಿರುವ ಗಡಿ ಬಿಕ್ಕಟ್ಟಿನ ನಡುವೆ, ಪ್ರಧಾನಿ ನರೇಂದ್ರ ಮೋದಿ, ‘ನಮ್ಮ ಭೂಪ್ರದೇಶವನ್ನು ಯಾರೂ ಪ್ರವೇಶಿಸಿಲ್ಲ. ನಮ್ಮ ಯಾವುದೇ ಶಿಬಿರಗಳನ್ನು ಯಾರೂ ಸೆರೆಹಿಡಿದಿಲ್ಲ' ಎಂದು ಹೇಳಿದ್ದಾರೆ.
ಭಾರತ-ಚೀನಾ ಗಡಿಯಲ್ಲಿನ ಸಂಘರ್ಷ ಕುರಿತು ಪ್ರಧಾನಿಯವರು ಅವರು ಸರ್ವಪಕ್ಷಗಳ ಸಭೆ ಕರೆದಿದ್ದರು. ವರ್ಚ್ಯುಯಲ್‍ ಸಭೆಯಲ್ಲಿ ಇಪ್ಪತ್ತು ರಾಜಕೀಯ ಪಕ್ಷಗಳ ನಾಯಕರು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.
ಇವರಲ್ಲದೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಉಪಸ್ಥಿತರಿದ್ದರು.
ಚೀನಾದ ಪೀಪಲ್ಸ್ ಲಿಬರೇಷನ್‍ ಆರ್ಮಿ ಜೊತೆ ಮುಖಾಮುಖಿಯಾಗಿ ಭಾರತೀಯ ಸೈನಿಕರು ಹುತಾತ್ಮರಾದ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ‘ ನಮ್ಮ ಇಪ್ಪತ್ತು ಸೈನಿಕರು ಹುತಾತ್ಮರಾಗಿದ್ದಾರೆ. ಆದರೆ ಭಾರತ ಮಾತೆಯ ಕಣ‍್ಣನ್ನು ಕಣ್ಣಿಟ್ಟು ನೋಡುವ ಧೈರ್ಯ ಮಾಡಿದವರಿಗೆ ನಮ್ಮವರು ತಕ್ಕ ಉತ್ತರ ನೀಡಿದ್ದಾರೆ.’ ಎಂದು ಹೇಳಿದ್ದಾರೆ.
ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುವ ಕುರಿತಂತೆ ಮಾತನಾಡಿದ ಪ್ರಧಾನಿ, ‘ಕಳೆದ ಕೆಲವು ವರ್ಷಗಳಲ್ಲಿ, ನಮ್ಮ ಗಡಿಗಳನ್ನು ರಕ್ಷಿಸಲು ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ.’ ಎಂದು ಅವರು ಹೇಳಿದರು.
ದೇಶದ ವೈಮಾನಿಕ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ ಎಂದ ಪ್ರಧಾನಿಯರು, ಕಳೆದ ಕೆಲ ವರ್ಷಗಳಲ್ಲಿ ಗಡಿ ಮತ್ತು ರಕ್ಷಣಾ ವಲಯಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತಿದೆ. ಯುದ್ಧ ವಿಮಾನಗಳು, ಸುಧಾರಿತ ಹೆಲಿಕಾಪ್ಟರ್ ಗಳು ಇಲ್ಲವೇ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳಾಗಿರಲಿ ನಮ್ಮ ಸಶಸ್ತ್ರ ಪಡೆಗಳ ಅವಶ್ಯಕತೆಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ.’ ಎಂದು ಹೇಳಿದ್ದಾರೆ.
ಈ ಹಿಂದೆ ನಿಗಾ ವಹಿಸಲಾಗದ ಪ್ರದೇಶಗಳನ್ನು ಭಾರತೀಯ ಪಡೆಗಳು ತೀವ್ರ ಮೇಲ್ವಿಚಾರಣೆ ನಡೆಸುತ್ತಿವೆ ಎಂದ ಮೋದಿ, ಕಾರ್ಯಾಚರಣೆ, ಪ್ರತಿ ದಾಳಿಗೆ ನಮ್ಮ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ. ನಮ್ಮಲ್ಲಿ ಈ ಸಾಮರ್ಥ್ಯಗಳಿವೆ. ಅದರಿಂದಲೇ ನಮ್ಮ ಒಂದು ಇಂಚು ಭೂಪ್ರದೇಶವನ್ನು ಅತಿಕ್ರಮಿಸುವಷ್ಟು ಧೈರ್ಯಮಾಡುತ್ತಿಲ್ಲ.’ ಎಂದು ಹೇಳಿದ್ದಾರೆ.
ಯುಎನ್‍ಐ ಎಸ್ಎಲ್‍ಎಸ್ 2301