Wednesday, Feb 26 2020 | Time 10:30 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

‘ಪಂಜಾಬ್ ಕೇಸರಿ’ ಸಂಪಾದಕ ಅಶ್ವಿನಿ ಕುಮಾರ್ ಚೋಪ್ರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಜ 18(ಯುಎನ್‍ಐ)- ‘ಪಂಜಾಬ್ ಕೇಸರಿ’ ಹಿಂದಿ ಪತ್ರಿಕೆಯ ಸಂಪಾದಕ ಹಾಗೂ ಮಾಜಿ ಬಿಜೆಪಿ ಸಂಸದ ಅಶ್ವಿನ್ ಕುಮಾರ್ ಚೋಪ್ರ ಅವರ ನಿಧನಕ್ಕೆ ಪ್ರಧಾನಿ ನರೇಂದ್ರಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
‘ ಅಶ್ವಿನ್ ಕುಮಾರ್ ಚೋಪ್ರ ಜೀ ಅವರ ನಿಧನದಿಂದ ದಿಗ್ಭ್ರಮೆಯಾಗಿದೆ. ಮಾಧ್ಯಮ ಲೋಕಕ್ಕೆ ಅವರು ಸಲ್ಲಿಸಿರುವ ಕೊಡುಗಾಗಿ ಅವರನ್ನು ಸದಾ ಕಾಲ ಸ್ಮರಿಸಬೇಕು. ತುಂಬಾ ಜಾಣ್ಮೆಯಿಂದ ಸಾರ್ವಜನಿಕ ಪ್ರತಿನಿಧಿಯಾಗಿ ಕೆಲಸ ಮಾಡಿರುವ ಅವರು ಅನೇಕ ಸಮುದಾಯ ಕಲ್ಯಾಣ ಉಪಕ್ರಮಗಳನ್ನು ಕೈಗೆತ್ತಿಕೊಂಡಿದ್ದರು. ಅವರ ಕುಟುಂಬದ ಸದಸ್ಯರು ಮತ್ತು ಸ್ನೇಹಿತರೊಂದಿಗೆ ನನ್ನ ಆಲೋಚನೆಗಳು ಸದಾ ಇರುತ್ತವೆ. ಓಂ ಶಾಂತಿ.’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
63 ವರ್ಷದ ಅಶ್ವಿನಿ ಕುಮಾರ್ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಗುರುವಾರ ಮೆದಾಂತ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿದಂತೆ ಅನೇಕ ಗಣ್ಯರು ಅಗಲಿದ ಹಿರಿಯ ಪತ್ರಕರ್ತನ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1737