Wednesday, Feb 26 2020 | Time 10:41 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

2018 ನೇ ವರ್ಷದಲ್ಲಿ 10,349 ರೈತರು ನೇಣಿಗೆ..

ನವದೆಹಲಿ, ಜನವರಿ, 10(ಯುಎನ್ಐ ) ಕೇಂದ್ರ ಸರಕಾರ ರೈತರ ಆದಾಯ ದುಪ್ಪಟ್ಟುಗೊಳಿಸುವುದಾಗಿ ಹೇಳುತ್ತಿದ್ದರೂ ರೈತರ ಸಮಸ್ಯೆ ಗಳು ಹೆಚ್ಚಾಗಿ ದೇಶಾದ್ಯಂತ 2018ನೇ ಸಾಲಿನಲ್ಲಿ 10,349 ರೈತರು ನೇಣಿಗೆ ಕೊರಳೊಡ್ಡಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಸರಕಾರಿ ಮೂಲಗಳಿಂದಲೇ ಬಹಿರಂಗವಾಗಿದೆ.
ದೇಶದ ಬೆನ್ನೆಲುಬಾಗಿರುವ ರೈತ ಸಾವಿಗೆ ಶರಣಾಗುತ್ತಿದ್ದಾನೆ. ಮಾಡಿದ ಸಾಲ ತೀರಿಸಲಾಗದೆ ಕೊನೆಗೆ ಸಾವಿನ ಮನೆಯತ್ತ ಮುಖ ಮಾಡುತ್ತಿದ್ದಾನೆ.
ಅನ್ನದಾತನ ಸಾವಿಗೆ ಕಾರಣಗಳು ಹಲವಾರು. ಪ್ರಕೃತಿ ವಿಕೋಪಗಳು ಒಂದೆಡೆಯಾದರೆ, ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದಿರುವುದು ಸಹ ಮತ್ತೊಂದೆಡೆ ರೈತರ ಸಾವಿಗೆ ಕಾರಣವಾಗಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ . ವರ್ಷಪೂರ್ತಿ ಶ್ರಮಪಟ್ಟು ಬೆಳೆದ ಬೆಳೆ ಕೊನೆ ಘಳಿಗೆಯಲ್ಲಿ ಕೈಗೆ ಸಿಗದಿದ್ದಾಗ ರೈತ ಸಾವಿನ ಮನೆ ತಟ್ಟುತ್ತಿದ್ದಾನೆ ಇಂತಹ ಪ್ರಕರಣಗಳು ಪ್ರತಿನಿತ್ಯವೂ ವರದಿಯಾಗುತ್ತಿದೆ
ಇದರ ಜೊತೆಗೆ ರಾಷ್ಟ್ರೀಯ ಅಪರಾಧ ದಾಖಲೆಗಳ ದಳ ಬಿಡುಗಡೆ ಮಾಡಿರುವ ವಾರ್ಷಿಕ ವರದಿಯಲ್ಲಿ 2018ರಲ್ಲಿ ದೇಶಾದ್ಯಂತ 50,74,634 ಅರಿವಿನ ಅಪರಾಧಗಳು ದಾಖಲಾಗಿವೆ. ಅಂದರೆ 2018ರಲ್ಲಿ ಪ್ರತಿನಿತ್ಯ 80 ಕೊಲೆ, 289 ಕಿಡ್ನಾಪ್ ಮತ್ತು 91 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ .
2018ರಲ್ಲಿ ದೇಶಾದ್ಯಂತ 50,74,634 ಅರಿವಿನ ಅಪರಾಧಗಳು ಸಂಭವಿಸಿದೆ. ಈ ಪೈಕಿ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ 31,32,954 ಅಪರಾಧ ಪ್ರಕರಣಗಳು ಮತ್ತು ವಿಶೇಷ ಕಾನೂನುಗಳ ಅಡಿಯಲ್ಲಿ 19,41,680 ಪ್ರಕರಣಗಳು ದಾಖಲಾಗಿವೆ ಎಂದೂ ವರದಿ ಹೇಳಿದೆ.
ಯುಎನ್ಐ ಕೆಎಸ್ಆರ್ 1020