Monday, Jun 1 2020 | Time 02:34 Hrs(IST)
International Share

28 ವರ್ಷಗಳ ಬಳಿಕ ಮತ್ತೆ ಪರಮಾಣು ಪರೀಕ್ಷೆಗೆ ಅಮೆರಿಕ ಚಿಂತನೆ?

ಮಾಸ್ಕೋ, ಮೇ 23 (ಸ್ಪುಟ್ನಿಕ್) ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರವು, 28 ವರ್ಷಗಳ ಬಳಿಕ ಮೊದಲ ಪರಮಾಣು ಪರೀಕ್ಷೆಗೆ ಚಿಂತನೆ ನಡೆಸಿದೆ ಎಂಬ ಮಾತು ಕೇಳಿಬಂದಿದೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತವು 28 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪರಮಾಣು ಪರೀಕ್ಷೆಯನ್ನು ನಡೆಸುವ ಸಾಧ್ಯತೆಯ ಬಗ್ಗೆ ಚರ್ಚಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯ ಪ್ರಕಾರ, ಮೇ 15 ರಂದು ರಾಷ್ಟ್ರೀಯ ಭದ್ರತೆಯ ಉಸ್ತುವಾರಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ.

ರಷ್ಯಾ ಮತ್ತು ಚೀನಾ ಕನಿಷ್ಠ ಪ್ರಮಾಣದ ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ ಎಂಬ ಆರೋಪಗಳು ಈ ಚರ್ಚೆಗೆ ಕಾರಣವಾಗಿದೆ. ಆದಾಗ್ಯೂ ಈ ಆರೋಪಗಳನ್ನು ವಾಷಿಂಗ್ಟನ್ ದೃಢೀಕರಿಸಿಲ್ಲ ಮತ್ತು ಮಾಸ್ಕೋ ಹಾಗೂ ಬೀಜಿಂಗ್ ದೇಶಗಳೆರಡೂ ಇದನ್ನು ನಿರಾಕರಿಸಿದೆ.

ಸಭೆ ಯಾವುದೇ ಸ್ಪಷ್ಟ ಫಲಿತಾಂಶವನ್ನು ನೀಡಿಲ್ಲ ಎಂದು ಪತ್ರಿಕೆ ವರದಿ ಮಾಡಿದೆ. ಸಭೆಯಲ್ಲಿ ಭಾಗವಹಿಸಿದ್ದವರು ರಷ್ಯಾ ಮತ್ತು ಚೀನಾ ಎದುರಿಸುತ್ತಿರುವ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಇತರ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎಂದು ಮೂಲವೊಂದು ವಾಷಿಂಗ್ಟನ್ ಪೋಸ್ಟ್‌ಗೆ ತಿಳಿಸಿದೆ.
ಈ ವರದಿಗಳ ಬಗ್ಗೆ ಅಮೆರಿಕ ರಾಷ್ಟ್ರೀಯ ಭದ್ರತಾ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಯುಎನ್‍ಐ ಎಸ್‍ಎ ವಿಎನ್ 1120
More News
ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

31 May 2020 | 6:08 PM

ನವದೆಹಲಿ, ಮೇ 31 (ಯುಎನ್ಐ)- ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ವಿಶ್ವದಲ್ಲಿ 60 ಲಕ್ಷದಾಟಿದ್ದು, 3.64 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.

 Sharesee more..
ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

31 May 2020 | 5:31 PM

ವಾಷಿಂಗ್ಟನ್ /ನವದೆಹಲಿ, ಮೇ 31 (ಯುಎನ್ಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನಡೆಯಬೇಕಿದ್ದ ಜಿ7 ಶೃಂಗ ಸಭೆಯನ್ನು ಮುಂದೂಡಿದ್ದು, ಅದನ್ನು 'ಔಟ್ ಡೇಟೆಟ್' ಎಂದು ಕರೆದಿದ್ದಾರೆ. ಜೊತೆಗೆ, ಜಿ 7 ತಂಡದಲ್ಲಿ ಭಾರತ, ಆಸ್ಟ್ರೇಲಿಯಾ, ರಷ್ಯಾ ಮತ್ತು ದಕ್ಷಿಣ ಕೊರಿಯಾವನ್ನು ಸೇರಿಸಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.

 Sharesee more..