Sunday, Aug 9 2020 | Time 14:27 Hrs(IST)
 • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
 • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
Karnataka Share

ರಾಜ್ಯಾದ್ಯಂತ ನಾಳೆ ಸಂಪೂರ್ಣ ಲಾಕ್‌ಡೌನ್‌: ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ; ಅಗತ್ಯ ವಸ್ತುಗಳಿಗೆ ವಿನಾಯಿತಿ

ರಾಜ್ಯಾದ್ಯಂತ ನಾಳೆ ಸಂಪೂರ್ಣ ಲಾಕ್‌ಡೌನ್‌: ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ; ಅಗತ್ಯ ವಸ್ತುಗಳಿಗೆ ವಿನಾಯಿತಿ
ರಾಜ್ಯಾದ್ಯಂತ ನಾಳೆ ಸಂಪೂರ್ಣ ಲಾಕ್‌ಡೌನ್‌: ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ; ಅಗತ್ಯ ವಸ್ತುಗಳಿಗೆ ವಿನಾಯಿತಿ

ಬೆಂಗಳೂರು, ಮೇ 23 (ಯುಎನ್ಐ) ನಾಲ್ಕನೇ ಹಂತದ ಲಾಕ್‌ಡೌನ್‌ ಸಡಿಲಿಕೆಯ ಮಧ್ಯೆಯೇ ಪ್ರತಿ ಭಾನುವಾರ ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸುವುದಾಗಿ ಸರ್ಕಾರ ಘೋಷಿಸಿದ್ದು, ನಾಳೆ ಭಾನುವಾರ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಲ್ಲಿರಲಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಶನಿವಾರ ಸಂಜೆಯಿಂದಲೇ ಕರ್ಫ್ಯೂ ಜಾರಿಯಲ್ಲಿದ್ದು, ಮನೆಯಿಂದ ಹೊರಗೆ ಬಾರದಂತೆ ತಡೆಯಲು ಪೊಲೀಸ್ ಇಲಾಖೆ ನಿಯಮಗಳನ್ನು ರೂಪಿಸಿದೆ. ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಮೊದಲ ಹಂತದ ಲಾಕ್ ಡೌನ್ ನಲ್ಲಿನ ನಿಯಮಗಳು ಜಾರಿಯಲ್ಲಿರಲಿವೆ.

ಹಣ್ಣು, ತರಕಾರಿ, ದಿನಸಿ, ಮಾಂಸದ ಅಂಗಡಿಗಳಿಗೆ ತೆರೆಯಲು ಅವಕಾಶ ನೀಡಲಾಗಿದ್ದು ಆಸ್ಪತ್ರೆಗಳು, ಮೆಡಿಕಲ್ ಶಾಪ್‌, ಫಾರ್ಮಸಿ ಗಳಿಗೆ ಅವಕಾಶ ನೀಡಲಾಗಿದೆ. ವೈದ್ಯರು, ನರ್ಸ್, ಆಂಬುಲೆನ್ಸ್, ಮಾಧ್ಯಮಗಳ ವಾಹನಗಳ ಓಡಾಟಕ್ಕೆ ಅವಕಾಶ ಒದಗಿಸಲಾಗಿದೆ.

ಡಯಾಲಿಸಿಸ್, ಅನಾರೋಗ್ಯ ಸಮಸ್ಯೆ ಇದ್ದವರು ಗರ್ಭಿಣಿಯರು ಆಸ್ಪತ್ರೆಗೆ ತೆರಳಲು ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಿಗೆ ಷರತ್ತಿನ ಅನುಮತಿ ಇರಲಿದೆ‌ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಅಗತ್ಯ ವಸ್ತುಗಳನ್ನ ಹೊರತು ಪಡಿಸಿ, ಉಳಿದ ಅಂಗಡಿ ಮುಂಗಟ್ಟುಗಳು ಬಂದ್ ಸಾರ್ವಜನಿಕ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಇರಲಿದ್ದು ಬಸ್ ಸಂಚಾರ ಸಂಪೂರ್ಣ ಸ್ಥಗಿತ ಗೊಳ್ಳಲಿದೆ.

ಬ್ಯೂಟಿ ಪಾರ್ಲರ್, ಸಲೂನ್, ಸ್ಪಾ, ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಲಿವೆ

ಗಾರ್ಮೆಂಟ್ಸ್ ಫ್ಯಾಕ್ಟರಿ ಸೇರಿದಂತೆ ಎಲ್ಲಾ ಕಾರ್ಖಾನೆಗಳು ಖಾಸಗಿ ಕಂಪನಿಗಳ ಬಾಗಿಲು ಬಂದ್ ಮಾಡಬೇಕಾಗುತ್ತದೆ. ಎಲ್ಲಾ ಪಾರ್ಕ್ ಗಳಿಗೂ ಬೀಗ ಬೀಳಲಿದ್ದು, ಜಾಗಿಂಗ್ ವಾಕಿಂಗ್ ಗೆ ಅವಕಾಶವಿಲ್ಲ. ಚಿನ್ನದ ಅಂಗಡಿಗಳು ಮುಚ್ಚಲಿದ್ದು ಆಟೋ, ಟ್ಯಾಕ್ಸಿ ಕ್ಯಾಬ್ ಗಳು ರಸ್ತೆಗೆ ಇಳಿಯುವಂತಿಲ್ಲ. ಖಾಸಗಿ ವಾಹನ ಬಳಸಿ ಓಡಾಡುವ ಹಾಗಿಲ್ಲ. ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ

ಪ್ರತಿದಿನ ತೆರೆಯುತ್ತಿದ್ದ ಬಾರ್‌ಗಳು ಮುಚ್ಚಲಿವೆ.

ಕಮೀಷನರೇಟ್ ವ್ಯಾಪ್ತಿಯಲ್ಲಿ ಕಮೀಷನರ್ ಮತ್ತು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಬಾರ್ ಕ್ಲೋಸ್ ಬಗ್ಗೆ ಆದೇಶ ಹೊರಡಿಸಲಿದ್ದಾರೆ. ಇಲ್ಲವಾದಲ್ಲಿ ರಾಜ್ಯ ಅಬಕಾರಿ ಆಯುಕ್ತರು ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಆದೇಶ ಹೊರಡಿಸಲಿದ್ದಾರೆ.

ಇಂದು ರಾತ್ರಿ ಏಳು ಗಂಟೆಗೆ ಎಲ್ಲಾ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ಸಂಚಾರ ನಿಲ್ಲಲಿದೆ.

ಸೋಮವಾರ ಬೆಳಗ್ಗೆ 7 ಗಂಟೆಗೆ ಯಥಾಸ್ಥಿತಿಯಂತೆ ಸಂಚಾರ ಆರಂಭವಾಗಲಿದೆ. ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ರಾಜ್ಯಾದ್ಯಂತ ಭಾನುವಾರ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಜನರು ಮನೆಯಿಂದ ಹೊರಬಾರದಂತೆ ಸರ್ಕಾರ ಎಚ್ಚರಿಕೆ ನೀಡಿದೆ.

ಯುಎನ್ಐ ಎಎಚ್ 1700

More News