Friday, Feb 28 2020 | Time 08:45 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Karnataka Share

ಹಕ್ಕುಗಳಿಗಿಂತ ಕರ್ತವ್ಯ ಮುಖ್ಯ: ಮೋದಿ

ಹಕ್ಕುಗಳಿಗಿಂತ ಕರ್ತವ್ಯ ಮುಖ್ಯ: ಮೋದಿ
ಹಕ್ಕುಗಳಿಗಿಂತ ಕರ್ತವ್ಯ ಮುಖ್ಯ: ಮೋದಿ

ನವದೆಹಲಿ, ಜ 24 [ಯುಎನ್ಐ] ದೇಶದ ಸಂವಿಧಾನ ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆಯಾದರೂ ಹಕ್ಕುಗಳಿಗಿಂತ ಕರ್ತವ್ಯಗಳು ಮುಖ್ಯ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಈ ಬಾರಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಪಾತ್ರವಾಗಿರುವ ೪೯ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಚಿಕ್ಕವಯಸ್ಸಿನಲ್ಲಿಯೇ ಪ್ರಶಸ್ತಿ ವಿಜೇತ ಮಕ್ಕಳು ಮಾಡಿರುವ ಅಪ್ರತಿಮ ಸಾಧನೆಗಳ ಬಗ್ಗೆ ತಮಗೆ ಅಚ್ಚರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅತ್ಯಂತ ಕ್ಲಿಷ್ಠಕರ ಪರಿಸ್ಥಿತಿಯಲ್ಲಿ ಈ ಮಕ್ಕಳು ಅಸಾಧಾರಣ ಧೈರ್ಯ ಪ್ರದರ್ಶಿಸಿದ್ದಾರೆ. ಪ್ರಶಸ್ತಿ ಪುರಸ್ಕಾರಗಳು ಸಾಧನೆಗಳಿಗೆ ಪೂರ್ಣವಿರಾಮವಾಗಬಾರದು. ದೇಶಕ್ಕೆ ಇನ್ನೂ ಹೆಚ್ಚಿನ ಅಮೂಲ್ಯ ಕೊಡುಗೆಗಳನ್ನು ನೀಡುವ ಸಾಮರ್ಥ್ಯದ ಬಗ್ಗೆ ಮಕ್ಕಳು ಸದಾ ಉತ್ಸಾಹ ಹೊಂದಿರಬೇಕು ಎಂದು ಹೇಳಿದರು.

ಹಲವು ವಲಯಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಮಕ್ಕಳ ಪ್ರಯತ್ನಗಳಿಗೆ ಅಭಿನಂದನೆ ಸಲ್ಲಿಸುವ ಮತ್ತು ಅವರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಗಳನ್ನು ನೀಡಲಾಗುತ್ತದೆ.

ಅನ್ವೇಷಣೆ, ಸಮಾಜಸೇವೆ, ವೈಚಾರಿಕತೆ, ಕ್ರೀಡೆ, ಧೈರ್ಯ, ಸಾಹಸ ಹಾಗೂ ಕಲೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳಿಗೆ ಬಾಲಶಕ್ತಿ ಪುರಸ್ಕಾರ ನೀಡಲಾಗುತ್ತದೆ. ಈ ಪ್ರಶಸ್ತಿ ಅಭಿನಂದನಾ ಪದಕ, ಒಂದು ಲಕ್ಷ ರೂಪಾಯಿ ನಗದು ಮತ್ತು ಅಭಿನಂದನಾ ಪತ್ರವನ್ನು ಒಳಗೊಂಡಿದೆ. ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಮಕ್ಕಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುರಸ್ಕಾರಗಳನ್ನು ವಿತರಿಸಿ ಗೌರವಿಸಿದರು.

ಯುಎನ್ಐ ವಿಎನ್ 1529

More News
ಪ್ರತಿ ಜಿಲ್ಲೆಯಲ್ಲಿಯೂ ಮಹಿಳಾ ಎಸ್‌ಪಿ ನೇತೃತ್ವದ ಪ್ರತ್ಯೇಕ ಪೊಲೀಸ್ ಠಾಣೆ ಸ್ಥಾಪನೆಯಾಗಲಿ: ಶೋಭಾ ಕರಂದ್ಲಾಜೆ

ಪ್ರತಿ ಜಿಲ್ಲೆಯಲ್ಲಿಯೂ ಮಹಿಳಾ ಎಸ್‌ಪಿ ನೇತೃತ್ವದ ಪ್ರತ್ಯೇಕ ಪೊಲೀಸ್ ಠಾಣೆ ಸ್ಥಾಪನೆಯಾಗಲಿ: ಶೋಭಾ ಕರಂದ್ಲಾಜೆ

27 Feb 2020 | 8:55 PM

ಬೆಂಗಳೂರು, ಫೆ.27(ಯುಎನ್ಐ) ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಶೋಷಣೆ, ಅತ್ಯಾಚಾರ ಪ್ರಕರಣಗಳ ಕುರಿತು ದೂರು ಸಲ್ಲಿಸಲು ಪ್ರತಿ ಜಿಲ್ಲೆಯಲ್ಲಿಯೂ ಮಹಿಳಾ ಎಸ್‌ಪಿ ನೇತೃತ್ವದ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಾಣವಾಗಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಸಲಹೆ ನೀಡಿದ್ದಾರೆ.

 Sharesee more..