Monday, Sep 16 2019 | Time 12:08 Hrs(IST)
 • ತ್ರಿಪುರಾದಲ್ಲಿ ಅಗ್ಗದ ದರದಲ್ಲಿ ಈರುಳ್ಳಿ ಪೂರೈಕೆ: ಮನೋಜ್ ಕಾಂತಿ ದೇಬ್
 • ಭಾರತದಲ್ಲಿ ಎಸ್ -400 ವಾಯು ರಕ್ಷಣಾ ವ್ಯವಸ್ಥೆ ಉತ್ಪಾದನೆ ಬಗ್ಗೆ ರಷ್ಯಾ ಪರಿಶೀಲನೆ-ರೋಸ್ಟೆಕ್ ಸಿಇಒ
 • ಕೆ ಎಸ್‍ ಈಶ್ವರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ: ಎಸ್‍ಡಿಪಿಐ
 • ಬಲವಂತದ ಭಾಷೆ ಹೇರಿಕೆ ಸಲ್ಲದು: ಸಿದ್ದರಾಮಯ್ಯ
 • ದೇಶದಲ್ಲಿ ಮಳೆಯಿಂದ ಈ ವರ್ಷ 1,422 ಜನರ ಸಾವು: ವರದಿ
 • ಪಂಕಜ್ ಅಡ್ವಾನಿಯ ಸ್ಥಿರ ಪ್ರದರ್ಶನ ಶ್ಲಾಘನೀಯ: ಮೋದಿ
 • ಬೇಗೂರು ಪೊಲೀಸರಿಂದ ರೌಡಿ ಶೀಟರ್ ಓಣಿ ಶ್ರೀಧರ್ ಕಾಲಿಗೆ ಗುಂಡೇಟು
 • ಪಾಕಿಸ್ತಾನದಲ್ಲಿ ಭದ್ರತೆ ಪರಿಶೀಲಿಸಿದ ನಂತರ ಪಂದ್ಯದ ಅಧಿಕಾರಿಗಳ ನೇಮಕ: ಐಸಿಸಿ
 • 47 ವರ್ಷಗಳ ಬಳಿಕ ಆ್ಯಷಸ್‌ ಟೆಸ್ಟ್ ಸರಣಿ ಡ್ರಾ
 • ಬಂಜಾ ಲುಕಾ ಚಾಲೆಂಜರ್‌: ರನ್ನರ್ ಅಪ್‌ಗೆ ತೃಪ್ತಿಪಟ್ಟ ಸುಮಿತ್‌ ನಗಾಲ್‌
 • ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ನಾಲ್ವರು ಯೋಧರಿಗೆ ಗಾಯ
Special Share

ಜುಲೈ 15 ರಂದು ಚಂದ್ರಯಾನ-2 ಉಡ್ಡಯನ-ಇಸ್ರೋ ಅಧ್ಯಕ್ಷ ಡಾ.ಕೆ.ಸಿವನ್

ಜುಲೈ 15 ರಂದು ಚಂದ್ರಯಾನ-2 ಉಡ್ಡಯನ-ಇಸ್ರೋ ಅಧ್ಯಕ್ಷ ಡಾ.ಕೆ.ಸಿವನ್
ಜುಲೈ 15 ರಂದು ಚಂದ್ರಯಾನ-2 ಉಡ್ಡಯನ-ಇಸ್ರೋ ಅಧ್ಯಕ್ಷ ಡಾ.ಕೆ.ಸಿವನ್

ಬೆಂಗಳೂರು, ಜೂನ್ 12 (ಯುಎನ್ಐ) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ - ಇಸ್ರೋದ ಮಹತ್ವಾಕಾಂಕ್ಷೆಯ ಹಾಗೂ ಭಾರತದ ಮೂರನೆಯ ಅಂತರ ಗ್ರಹ ಯೋಜನೆ, ಚಂದ್ರಯಾನ-2 ಉಡ್ಡಯನಕ್ಕೆ ಮುಹೂರ್ತ ನಿಗದಿಯಾಗಿದೆ.

ಜುಲೈ 15ರಂದು ಬೆಳಗ್ಗೆ 2 ಗಂಟೆ 51 ನಿಮಿಷಕ್ಕೆ ಚಂದ್ರಯಾನ -2 ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ನಭೋಮಂಡಲದತ್ತ ಪ್ರಯಾಣ ಆರಂಭಿಸಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಕೆ. ಸಿವನ್ ಬುಧವಾರ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದು ಆರ್ಬಿಟರ್, ಲ್ಯಾಂಡರ್ ಹಾಗೂ ಲ್ಯಾಂಡ್ ರೋವರ್ ಗಳನ್ನು ಒಳಗೊಂಡಿದ್ದು, ಸೆಪ್ಟೆಂಬರ್ 6 ಅಥವಾ 7ರಂದು ರೋವರ್ ಚಂದ್ರನ ಮೇಲ್ಮೈ ಸ್ವರ್ಶಿಸಲಿದೆ. ನಂತರ, ರೋವರ್ ಚಂದ್ರದ ಮೇಲ್ಮೈ ಹಾಗೂ ಪರಿಸರದ ಅಧ್ಯಯನ ನಡೆಸಿ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನಿಸಲಿದೆ. ಚಂದ್ರನ ಮೇಲಿರುವ ಒಂದು ದಿನದ ಅವಧಿ ಭೂಮಿಯ 13 ದಿನಗಳಿಗೆ ಸಮಾನವಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಯುಎನ್ಐ ಎಸ್ಎಚ್ ವಿಎನ್ 1545