Sunday, Aug 9 2020 | Time 14:37 Hrs(IST)
  • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
  • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
  • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
  • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
  • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
  • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
  • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
  • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
  • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
  • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
  • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
  • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
  • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
  • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
  • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
Special Share

ತಿರುಪತಿ ತಿಮ್ಮಪ್ಪನ ಆಸ್ತಿಗಳ ಮಾರಾಟಕ್ಕೆ ಸಿದ್ಧವಾಗುತ್ತಿರುವ ಟಿಟಿಡಿ

ತಿರುಪತಿ ತಿಮ್ಮಪ್ಪನ  ಆಸ್ತಿಗಳ  ಮಾರಾಟಕ್ಕೆ ಸಿದ್ಧವಾಗುತ್ತಿರುವ  ಟಿಟಿಡಿ
ತಿರುಪತಿ ತಿಮ್ಮಪ್ಪನ ಆಸ್ತಿಗಳ ಮಾರಾಟಕ್ಕೆ ಸಿದ್ಧವಾಗುತ್ತಿರುವ ಟಿಟಿಡಿ

ತಿರುಪತಿ, ಮೇ ೨೩(ಯುಎನ್‌ಐ)- ತಿರುಮಲ -ತಿರುಪತಿ ದೇವಸ್ಥಾನ ಮಂಡಳಿ ಸಂಚಲನ ನಿರ್ಣಯ ಕೈಗೊಂಡಿದೆ. ತಮಿಳುನಾಡಿನ ೨೩ ಸ್ಥಳಗಳಲ್ಲಿರುವ ತಿರುಪತಿ ತಿಮ್ಮಪ್ಪನ ಆಸ್ತಿಗಳನ್ನು ವಿಕ್ರಯ ನಡೆಸಲು ವೇದಿಕೆ ಸಿದ್ದಗೊಳ್ಳುತ್ತಿದೆ.

ಸ್ಥಿರಾಸ್ತಿಗಳನ್ನು ವಿಕ್ರಯಗೊಳಿಸಲು ಟಿಟಿಡಿ ಆಡಳಿತ ಮಂಡಳಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ವಿಕ್ರಯ ಪ್ರಕ್ರಿಯೆ ನಡೆಸಲು ೮ ಸಮಿತಿಗಳನ್ನು ರಚಿಸಲಾಗಿದ್ದು, ಆಸ್ತಿಗಳನ್ನು ಬಹಿರಂಗ ಹರಾಜು ಮೂಲಕ ವಿಕ್ರಯ ನಡೆಸಲು ನಿರ್ಧರಿಸಲಾಗಿದೆ.

ಈ ಪ್ರಕ್ರಿಯೆಯ ಭಾಗವಾಗಿ, ಆಸ್ತಿಗಳನ್ನು ನೋಂದಣಿ ಮಾಡುವ ಅಧಿಕಾರವನ್ನು ಟಿಟಿಡಿ ಅಧಿಕಾರಿಗಳಿಗೆ ನೀಡಲಾಗಿದೆ. ಟಿಟಿಡಿ ಸ್ವತ್ತುಗಳನ್ನು ತಮಗೆ ಬೇಕಾದವರಿಗೆ ನೀಡಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂಬ ಟೀಕೆಗಳು ಕೇಳಿ ಬರುತ್ತಿವೆ. ಕೂಡಲೇ ತಿರುಪತಿ ತಿಮ್ಮಪ್ಪನ ಆಸ್ತಿಗಳ ವಿಕ್ರಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ,

ತಿರುಪತಿ ತಿಮ್ಮಪ್ಪನಿಗೆ ಭಕ್ತರು ನೀಡಿದ ಆಸ್ತಿಗಳನ್ನು ನಿರರ್ಥಕ ಎಂದು ಟಿಟಿಡಿ ಹೇಳುತ್ತಿರುವುದು ಅತ್ಯಂತ ನೋವಿನ ವಿಷಯ ಎಂದು ಟಿಡಿಪಿ ನಾಯಕ ಓವಿ ರಮಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಸ್ಥಳಗಳಲ್ಲಿ ಹಿಂದೂ ಧರ್ಮ ಪ್ರಚಾರ ನಡೆಯಬೇಕು ಎಂದು ಹೇಳಿದ್ದಾರೆ. ಟಿಟಿಡಿ ಆಸ್ತಿಗಳ ಮಾರಾಟ ಕುರಿತು ಜನಸೇನಾ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಕ್ಕಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆಡಳಿತದಲ್ಲಿ ರಾಜ್ಯದಲ್ಲಿ ದೇವರಿಗೆ, ದೇವರ ಆಸ್ತಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ದೂರಿದ್ದಾರೆ. ಟಿಟಿಡಿ ಆಸ್ತಿಗಳ ಸಂರಕ್ಷಣೆಗೆ ಹೊರಾಟ ನಡೆಸಲಾಗುವುದು, ತಿರುಪತಿಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಭಕ್ತರ ಮುಂದಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಹೇಳಿದ್ದಾರೆ.

ಯುಎನ್‌ಐ ಕೆವಿಆರ್ ೨೫೦೭