Tuesday, Jul 23 2019 | Time 00:28 Hrs(IST)
Entertainment Share

ಇಂದು ಹ್ಯಾಟ್ರಿಕ್ ಹೀರೋ ಹುಟ್ಟುಹಬ್ಬ: ಅಭಿಮಾನಿಗಳಿಂದ ಶುಭಾಶಯದ ಮಹಾಪೂರ

ಬೆಂಗಳೂರು, ಜುಲೈ 12 (ಯುಎನ್ಐ) ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಚಂದನವನದ ನಟ, ನಟಿಯರು, ನಿರ್ದೇಶಕ, ನಿರ್ಮಾಪಕರು ಹಾಗೂ ಅಭಿಮಾನಿಗಳು ಶುಭ ಕೋರಿದ್ದಾರೆ
ಲಂಡನ್ ನಲ್ಲಿ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿರುವ ಕಾರಣ ಈ ವರ್ಷ ಅವರ ಜೊತೆಗಿನ ಜನ್ಮದಿನದ ಆಚರಣೆಯನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ರೋರಿಂಗ್ ಸ್ಟಾರ್ ಶ್ರೀಮುರಳಿ, “ಶಿವಣ್ಣ ಮಾಮ, ಜನ್ಮದಿನದ ಶುಭಾಶಯಗಳು. ಈ ವರ್ಷ ನಿಮಗೆ ಸಂತಸ ತರಲಿ, ಲವ್ ಯು” ಎಂದು ಟ್ವೀಟ್ ಮಾಡಿದ್ದು, ಶಿವರಾಜ್ ಕುಮಾರ್ ಜೊತೆಗಿನ ಭಾವಚಿತ್ರವನ್ನು ಶೇರ್ ಮಾಡಿದ್ದಾರೆ.
ನಟ ಅಕುಲ್ ಬಾಲಾಜಿ, ನಿರ್ದೇಶಕ ಶಶಾಂಕ್, ನೀನಾಸಂ ಸತೀಶ್, ನಿರೂಪ್ ಭಂಡಾರಿ,
ನಿರ್ದೇಶಕ ಪವನ್ ಒಡೆಯರ್ ಮೊದಲಾದವರು, “ಸರಳ ವ್ಯಕ್ತಿತ್ವದ ಶಿವಣ್ಣನಿಗೆ ಹುಟ್ಟು ಹಬ್ಬದ ಶುಭಾಶಯಗಳು” ಎಂದು ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ ಕೆಲ ದಿನಗಳ ಹಿಂದೆಯಷ್ಟೇ, ಶಸ್ತ್ರ ಚಿಕಿತ್ಸೆಗಾಗಿ ಲಂಡನ್​ಗೆ ತೆರಳಿದ್ದರು. ಬುಧವಾರ ಶಿವಣ್ಣನವರಿಗೆ ಶಸ್ತ್ರ ಚಿಕಿತ್ಸೆ ನಡೆದು ಆಫರೇಶನ್​ ಯಶಸ್ವಿಯಾಗಿದ್ದು, ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆಯಂತೆ

ಶಿವಣ್ಣ ಆರೋಗ್ಯವಾಗಿದ್ದಾರೆ, ವೈದ್ಯರು ಒಂದು ತಿಂಗಳು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ಶಿವಣ್ಣ ಆಪ್ತ ಹಾಗೂ ನಿರ್ಮಾಪಕ ಕೆ.ಪಿ.ಶ್ರೀಕಾಂತ್​ ಟ್ವಿಟರ್​ ಖಾತೆಯ ಮೂಲಕ ಸ್ಪಷ್ಟ ಪಡಿಸಿದ್ದಾರೆ.

ಶಿವರಾಜ್ ಕುಮಾರ್ ಜೊತೆಗೆ ಪತ್ನಿ ಗೀತಾ ಶಿವರಾಜಕುಮಾರ್ ಹಾಗೂ ಪುತ್ರಿ ನಿವೇದಿತಾ ಕೂಡ ಲಂಡನ್​ಗೆ ತೆರಳಿದ್ದಾರೆ ಪುನೀತ್ ರಾಜಕುಮಾರ್ ಕೂಡ ಅಣ್ಣನ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ.

ಕಳೆದ 6 ತಿಂಗಳ ಹಿಂದೆ ಪ್ರವಾಸಕ್ಕೆ ತೆರಳಿದ್ದ ವೇಳೆ ಹಿಮದಲ್ಲಿ ಜಾರಿ ಬಿದ್ದು ಶಿವಣ್ಣ ಗಾಯಗೊಂಡಿದ್ದು, ಆ ವೇಳೆ ಅವರಿಗೆ ಭುಜದ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಶೂಟಿಂಗ್​ ಮುಗಿಸಿದ ಶಿವಣ್ಣ ಹುಟ್ಟುಹಬ್ಬ ಆಚರಣೆಯನ್ನು ಕೈಬಿಟ್ಟು ಆಪರೇಶನ್​ಗಾಗಿ ಲಂಡನ್​ಗೆ ತೆರಳಿದ್ದರು.
ಯುಎನ್ಐ ಎಸ್ಎ ಆರ್ ಕೆ 1235
More News
ಈ ವಾರ ತೆರೆಗೆ `ದಶರಥ’

ಈ ವಾರ ತೆರೆಗೆ `ದಶರಥ’

22 Jul 2019 | 5:57 PM

ಬೆಂಗಳೂರು, ಜುಲೈ 22 (ಯುಎನ್ಐ) ಎಂ ಎಸ್ ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಅಕ್ಷಯ್ ಸಮರ್ಥ ನಿರ್ಮಿಸಿರುವ `ದಶರಥ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ

 Sharesee more..

ಜುಲೈ 24ರಂದು `ನನ್ನ ಪ್ರಕಾರ’ ಹಾಡು ಬಿಡುಗಡೆ

22 Jul 2019 | 5:35 PM

 Sharesee more..

ಆಸ್ಟ್ರೇಲಿಯಾಗೆ ‘ಗಂಟುಮೂಟೆ’

22 Jul 2019 | 5:28 PM

 Sharesee more..

ಮುಕೇಶ್ ಜನ್ಮದಿನ: ಪ್ರಸಿದ್ಧ ಗಾಯಕನ ಸ್ಮರಣೆ

22 Jul 2019 | 4:50 PM

ಕೋಲ್ಕತಾ, ಜುಲೈ 22 (ಯುಎನ್ಐ) “ಜೀನಾ ಯಹಾ, ಮರ್ನಾ ಯಹಾ, ಇಸ್ ಕೆ ಸಿವಾ ಜಾನಾ ಕಹಾ” ಹಾಡನ್ನು ಇಂದಿನ ಯುವಪೀಳಿಗೆಯೂ ಹಾಡಿ ನಲಿಯುತ್ತಿದೆ ಇಂತಹ ಹಲವು ಗೀತೆಗಳೊಂದಿಗೆ ತನ್ನ ವಿಶಿಷ್ಟ ಗಾಯನದಿಂದ ಭಾರತೀಯ ಚಿತ್ರರಂಗದಲ್ಲಿ ಛಾಪು ಮೂಡಿಸಿರುವ ಮುಕೇಶ್ ಅವರ 96ನೇ ಜನ್ಮದಿನವನ್ನು ಸೋಮವಾರ ದೇಶಾದ್ಯಂತ ಆಚರಿಸುತ್ತಿದ್ದು, ಸಂಗೀತ ಕಾರ್ಯಕ್ರಮಗಳ ಮೂಲಕ ನಮನ ಸಲ್ಲಿಸಲಾಗುತ್ತಿದೆ

 Sharesee more..

ಈ ವಾರ ‘ಮಹಿರ’ ತೆರೆಗೆ

22 Jul 2019 | 4:17 PM

 Sharesee more..