Monday, Jun 24 2019 | Time 14:43 Hrs(IST)
 • ಐಎಂಎ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ಶರಣಾದರೆ ಸೂಕ್ತ ರಕ್ಷಣೆ - ಜಮೀರ್ ಅಹಮದ್ ಖಾನ್
 • ಮಹತ್ವದ ಕುಡಿಯುವ ನೀರು ಅಭಾವ ವಿಷಯ ಕುರಿತು ಪ್ರತ್ಯೇಕ ಚರ್ಚೆ ಅಗತ್ಯ: ವೆಂಕಯ್ಯ ನಾಯ್ಡು
 • ಶಮಿ ಹ್ಯಾಟ್ರಿಕ್‌ ಸಾಧನೆಯೇ ನನ್ನ ಸ್ಮರಣೆಗೆ ಕಾರಣ: ಚೇತನ್‌ ಶರ್ಮಾ
 • 100 ದಶಲಕ್ಷ ಮಂದಿಯಿಂದ ಇಂಡೋ-ಪಾಕ್‌ ಪಂದ್ಯ ವೀಕ್ಷಣೆ
 • ನೀರಿನ ಬಿಕ್ಕಟ್ಟು: ಜೈಲುಭರೋ ಚಳುವಳಿ ಸ್ಟಾಲಿನ್ ಎಚ್ಚರಿಕೆ
 • ಬಿಎಸ್ ಪಿ- ಎಸ್ ಪಿ ಮೈತ್ರಿ ಮುರಿದುಕೊಂಡ ಮಾಯಾವತಿ
 • ನಾಳೆ ಇಂಗ್ಲೆಂಡ್‌-ಆಸ್ಟ್ರೇಲಿಯಾ ವಿರುದ್ಧ ಹೈವೋಲ್ಟೇಜ್ ಕದನ
 • ಭಾರತೀಯ ವೈಮಾನಿಕ ಪ್ರದೇಶವನ್ನು ಪಾಕ್ ಎಂದಿಗೂ ಉಲ್ಲಂಘಿಸಿಲ್ಲ: ಏರ್ ಚೀಫ್‍ ಮಾರ್ಷಲ್‍ ಧನೋವಾ
 • ಬಾಂಗ್ಲಾದೇಶ: ರೈಲು ಹಳಿ ತಪ್ಪಿಏಳು ಸಾವು, 200 ಮಂದಿಗೆ ಗಾಯ
 • ಗ್ರಾಮ ವಾಸ್ತವ್ಯ- ಸರ್ಕಾರದ ಶೂನ್ಯ ಸಾಧನೆ : ಬಿಜೆಪಿಯಿಂದ ಕಿರು ಹೊತ್ತಿಗೆ
 • ಹೊಸ ವಿಮಾನ ಸೇರ್ಪಡೆಯಾಗುವವರೆಗೆ ಎಎನ್ -32 ವಿಮಾನ ಮುಂದುವರಿಕೆ: ವಾಯು ಪಡೆ ಮುಖ್ಯಸ್ಥ ಧನೋವಾ
 • ಪಾಕಿಸ್ತಾನಕ್ಕೆ ಶೊಯೆಬ್‌ ಅಕ್ತರ್‌ ನೀಡಿದ ಸಲಹೆ ಹೀಗಿದೆ
 • ಕರ್ತವ್ಯ ನಿರ್ಲಕ್ಯ, 50 ವರ್ಷಮೀರಿದ ಪೊಲೀಸರಿಗೆ ಕಡ್ಡಾಯ ನಿವೃತ್ತಿ; ಉತ್ತರ ಪ್ರದೇಶ ಸಿಎಂ ಯೋಗಿ ಆದೇಶ
 • ಕರ್ತವ್ಯ ನಿರ್ಲಕ್ಯ, 50 ವರ್ಷಮೀರಿದ ಪೊಲೀಸರಿಗೆ ಕಡ್ಡಾಯ ನಿವೃತ್ತಿ; ಉತ್ತರ ಪ್ರದೇಶ ಸಿಎಂ ಯೋಗಿ ಆದೇಶ
 • ಮನ್ಸೂನ್‍ ಖಾನ್‍ನೊಂದಿಗೆ ಯಾವುದೇ ಸಂಬಂಧವಿಲ್ಲ: ರಹ್ಮಾನ್‍ ಖಾನ್ ಸ್ಪಷ್ಟನೆ
business economy Share

ಕೈಗಾರಿಕೆ, ವ್ಯಾಪಾರ ಸಂಘಟನೆ, ಸೇವಾ ವಲಯದೊಂದಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವಭಾವಿ ಸಭೆ

ನವದೆಹಲಿ, ಜೂನ್ 11 (ಯುಎನ್ಐ) ಕೈಗಾರಿಕೆ, ವ್ಯಾಪಾರ ಸಂಘಟನೆ, ಸೇವಾ ವಲಯದ ತಜ್ಞರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಎರಡನೇ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು.
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಲಯದ ತಜ್ಞರೊಂದಿಗೆ ನಿರ್ಮಲಾ ಸೀತಾರಾಮನ್ ಮೊದಲ ಸಭೆ ನಡೆಸಿದ್ದರು.
ಜುಲೈ 5 ರಂದು ಮಂಡನೆಯಾಗಲಿರುವ 2019-20 ರ ಬಜೆಟ್ ಗೆ ಪೂರ್ವಭಾವಿಯಾಗಿ ಸಚಿವರು ಸಂಬಂಧಪಟ್ಟ ತಂಡದೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ.
2014 ದಿಂದೀಚೆಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಉಪಕ್ರಮಗಳ ಫಲವಾಗಿ ಒಟ್ಟಾರೆ ವ್ಯಾಪಾರ ವಾತಾವರಣ ಸುಧಾರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಸ್ತುತ ಇದ್ದ ನಿಯಮಗಳ ಸರಳೀಕರಣಕ್ಕೆ ಆದ್ಯತೆ ನೀಡಲಾಗಿದೆ ಮತ್ತು ಇ - ಆಡಳಿತ ಸುಧಾರಿಸಲು ಮಾಹಿತಿ ತಂತ್ರಜ್ಞಾನವನ್ನು ಸಮರ್ಥವಾಗಿ ಅಳವಡಿಸಿಕೊಳ್ಳಲಾಗಿದೆ. ಈ ಮೂಲಕ 190 ರಾಷ್ಟ್ರಗಳ ಪೈಕಿ ಭಾರತ 77 ನೇ ಸ್ಥಾನಕ್ಕೆ ಜಿಗಿದಿದೆ ಎಂದು ಅವರು ಹೇಳಿದ್ದಾರೆ. ದೇಶದ ಒಟ್ಟಾರೆ ಕಾರ್ಯಬಲದ ಶೇ 24 ರಷ್ಟು ಕೈಗಾರಿಕೆಗಳಲ್ಲಿದ್ದು ಪ್ರದೇಶಾವಾರು ಹೆಚ್ಚಿನ ಉದ್ಯೋಗ ಸೃಷ್ಟಿಗೆ ಕೈಗಾರಿಕೆಗಳು ನೆರವಾಗಬೇಕು ಎಂದರು.
ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಹಣಕಾಸು ಕಾರ್ಯದರ್ಶಿ ಸುಭಾಷ್ ಸಿ ಗರ್ಗ್, ವೆಚ್ಚ ಕಾರ್ಯದರ್ಶಿ ಗಿರೀಶ್ ಚಂದ್ರ ಮರ್ಮು, ಕಂದಾಯ ಕಾರ್ಯದರ್ಶಿ ಅಜಯ್ ನಾರಾಯಣ್ ಪಾಂಡೆ ಮತ್ತು ವಾಣಿಜ್ಯ ಕಾರ್ಯದರ್ಶಿ ಅನೂಪ್ ವಾಧವನ್ ಮತ್ತಿರರು ಸಭೆಯಲ್ಲಿ ಉಪಸ್ಥಿತರಿದ್ದರು.
ಭಾರತದ ಆರ್ಥಿಕತೆಗೆ ಚೇತರಿಕೆ ನೀಡಲು ಕೈಗಾರಿಕಾ ವಲಯ, ಭೂ ಸುಧಾರಣೆ, ವಿಶೇಷ ಆರ್ಥಿಕ ವಲಯ, ಕೈಗಾರಿಕಾ ನೀತಿ, ಸಂಶೋಧನೆಯಲ್ಲಿ ಹೂಡಿಕೆ, ತೆರಿಗೆ ಸರಳೀಕರಣ ಮೊದಲಾದವುಗಳಿಗೆ ಸಂಬಂಧಿಸಿದಂತೆ ಕೈಗಾರಿಕೆ, ಸೇವಾ ವಲಯ ಮತ್ತು ವ್ಯಾಪಾರ ಸಂಘಟನೆಗಳ ಪ್ರತಿನಿಧಿಗಳು ಹಲವಾರು ಸಲಹೆಗಳನ್ನು ನೀಡಿದ್ದಾರೆ.
ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ), ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ), ಕಾರ್ಪೊರೇಟ್ ತೆರಿಗೆ, ಇ - ಕಾಮರ್ಸ್, ಶಿಕ್ಷಣ, ಆರೋಗ್ಯ ವಲಯ, ನವೋದ್ಯಮ (ಸ್ಟಾರ್ಟ್ ಅಪ್) ಸೇರಿದಂತೆ ವಿವಿಧ ವಲಯಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಲಹೆ ನೀಡಲಾಯಿತು.
ಇದಕ್ಕೂ ಮುನ್ನ ಸಚಿವೆ ನಿರ್ಮಲಾ ಸೀತಾರಾಮನ್ ಗ್ರಾಮೀಣ ವಲಯದ ಆರ್ಥಿಕ ಮತ್ತು ಸಾಮಾಜಿಕ ಮೂಲಸೌಕರ್ಯ ಉತ್ತೇಜನಕ್ಕೆ ಕೈಗೊಳ್ಳಬಹುದಾದ ಕ್ರಮಗಳು, ಕೃಷಿ ಮತ್ತು ಕೃಷಿಯೇತರ ವಲಯದಲ್ಲಿ ನಿರುದ್ಯೋಗ ಮತ್ತು ಬಡತನ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ಕೃಷಿ ವಲಯದ ಸಮಸ್ಯೆಗಳೂ ಪ್ರಸ್ತುತ ಸರ್ಕಾರಕ್ಕೆ ಆದ್ಯತಾ ವಿಷಯವಾಗಿದ್ದು ದೇಶದ ವಿವಿಧ ಭಾಗಗಳಲ್ಲಿನ ಕೃಷಿ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಮೀನುಗಾರಿಕಾ ವಲಯದ ತಜ್ಞರೊಂದಿಗೂ ಸಮಾಲೋಚನೆ ನಡೆಸಿ ಜಲಸಂಪನ್ಮೂಲಗಳ ಸಮರ್ಥ ಬಳಕೆಯಾಗುವತ್ತ ಗಮನ ಹರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಯುಎನ್ಐ ಜಿಎಸ್‌ಆರ್ ವಿಎನ್‌ 2100