Monday, Jun 1 2020 | Time 02:12 Hrs(IST)
International Share

ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಬ್ರೆಜಿಲ್ ಗೆ ಎರಡನೇ ಸ್ಥಾನ

ನವದೆಹಲಿ, ಮೇ 23 (ಯುಎನ್ಐ)- ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ದಕ್ಷಿಣ ಅಮೆರಿಕಾವನ್ನು ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್‌ನ (ಕೋವಿಡ್-19) 'ನೂತನ ಕೇಂದ್ರ' ಎಂದು ಹೆಸರಿಸಿದೆ. ದಕ್ಷಿಣ ಅಮೆರಿಕಾದ ಬ್ರೆಜಿಲ್‌ನಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರ ಸಂಖ್ಯೆ ಮೂರು ಲಕ್ಷಕ್ಕೂ ಮೀರಿದೆ. ಇನ್ನು ವಿಶ್ವದಲ್ಲೇ ಅತಿ ಹೆಚ್ಚು ಪೀಡಿತರನ್ನು ಹೊಂದಿದ ಎರಡನೇ ದೇಶ ಬ್ರೆಜಿಲ್ ಆಗಿದ್ದು, ಈ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ.

ಬ್ರೆಜಿಲ್ ನಲ್ಲಿ ಹೆಚ್ಚಿನ ಸಂಖ್ಯೆಯ ಕೊರೊನಾ ಸೋಂಕುಗಳು ಮತ್ತು 21,000 ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ. ದೇಶದಲ್ಲಿ ಈ ಬಗ್ಗೆ ತನಿಖೆ ನಡೆಯುತ್ತಿದೆ ಮತ್ತು ನಿಜವಾದ ಅಂಕಿ ಅಂಶಗಳು ಇನ್ನೂ ಹೆಚ್ಚಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬ್ರೆಜಿಲ್ ನಲ್ಲಿ, ಕಳೆದ 24 ಗಂಟೆಗಳಲ್ಲಿ 1001 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ಕು ದಿನಗಳಲ್ಲಿ ಇದು ಮೂರನೇ ಬಾರಿಗೆ ಈ ಕಾಯಿಲೆಯಿಂದ ಒಂದೇ ದಿನದಲ್ಲಿ 1000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಅಮೆರಿಕದ ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್ಎಸ್ಇ) ದ ಮಾಹಿತಿಯ ಪ್ರಕಾರ, ಬ್ರೆಜಿಲ್ ನಲ್ಲಿ ಕೊರೊನಾ ಸೋಂಕಿನ ಸಂಖ್ಯೆ 3,30,890 ಕ್ಕೆ ಏರಿದ್ದು, ಮೃತ ಪಟ್ಟವರ ಸಂಖ್ಯೆ 21,048 ಹೆಚ್ಚಳವಾಗಿದೆ.

ಯುಎನ್ಐ ವಿಎನ್ಎಲ್ 1830
More News
ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

31 May 2020 | 6:08 PM

ನವದೆಹಲಿ, ಮೇ 31 (ಯುಎನ್ಐ)- ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ವಿಶ್ವದಲ್ಲಿ 60 ಲಕ್ಷದಾಟಿದ್ದು, 3.64 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.

 Sharesee more..
ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

31 May 2020 | 5:31 PM

ವಾಷಿಂಗ್ಟನ್ /ನವದೆಹಲಿ, ಮೇ 31 (ಯುಎನ್ಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನಡೆಯಬೇಕಿದ್ದ ಜಿ7 ಶೃಂಗ ಸಭೆಯನ್ನು ಮುಂದೂಡಿದ್ದು, ಅದನ್ನು 'ಔಟ್ ಡೇಟೆಟ್' ಎಂದು ಕರೆದಿದ್ದಾರೆ. ಜೊತೆಗೆ, ಜಿ 7 ತಂಡದಲ್ಲಿ ಭಾರತ, ಆಸ್ಟ್ರೇಲಿಯಾ, ರಷ್ಯಾ ಮತ್ತು ದಕ್ಷಿಣ ಕೊರಿಯಾವನ್ನು ಸೇರಿಸಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.

 Sharesee more..