Sunday, Aug 9 2020 | Time 14:25 Hrs(IST)
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
 • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
 • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
National Share

ಗುವಾಹತಿಯಲ್ಲಿ ಸಿಆರ್‌ಪಿಎಫ್ ನ 6 ಸಿಬ್ಬಂದಿಗೆ ಕೊರೊನವೈರಸ್ ಸೋಂಕು ದೃಢ

ಗುವಾಹಟಿ, ಮೇ 23 (ಯುಎನ್‌ಐ) ಅಸ್ಸಾಂನ ಗುವಾಹತಿಯ 9 ನೇ ಮೈಲಿ ಪ್ರದೇಶದ ಸಿಆರ್‌ಪಿಎಫ್ ಗ್ರೂಪ್ ಸೆಂಟರ್‌ನ ಆರು ಸಿಬ್ಬಂದಿಗೆ ಕೊವಿಡ್‍-19 ಸೋಂಕು ದೃಢಪಟ್ಟಿದೆ.
ಸಿಆರ್‌ಪಿಎಫ್‌ನ ಸುಮಾರು 98 ಸಿಬ್ಬಂದಿ ಮೇ 17 ರಂದು ವಿಶೇಷ ವಿಮಾನದ ಮೂಲಕ ರಜೆ ಮುಗಿಸಿ ವಾಪಸ್ಸಾಗಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಎಲ್ಲರನ್ನೂ ನಗರದ ಸರುಸಜೈ ಕ್ವಾರಂಟೈನ್‍ ಶಿಬಿರಕ್ಕೆ ಸೇರಿಸಲಾಗಿತ್ತು. ಅಲ್ಲಿ ಅವರೆಲ್ಲದರ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ. ನಂತರ ಅವರನ್ನು 9 ನೇ ಮೈಲಿನಲ್ಲಿರುವ ಗ್ರೂಪ್ ಸೆಂಟರ್ ಸಂಕೀರ್ಣದೊಳಗಿನ ಕೇಂದ್ರೀಯ ವಿದ್ಯಾಲಯ ಸಂಕೀರ್ಣದಲ್ಲಿ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು.
ನಿನ್ನೆ ಆರು ಸಿಬ್ಬಂದಿಗೆ ಸೋಂಕು ದೃಢಪಟ್ಟ ನಂತರ ಗ್ರೂಪ್‍ ಸೆಂಟರ್‍ ಅನ್ನು ಕಂಟೈನ್‍ಮೆಂಟ್‍ ವಲಯವೆಂದು ಘೋಷಿಸಲಾಗಿದೆ. ಆಡಳಿತದ ಅಧಿಕಾರಿಗಳು ಮತ್ತು ಸಿಆರ್‌ಪಿಎಫ್ ಹಿರಿಯ ಅಧಿಕಾರಿಗಳು ಇಂದು ಕೇಂದ್ರದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 2031