Friday, Feb 28 2020 | Time 09:39 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Entertainment Share

ನಾನು ಮತ್ತು ಗುಂಡ : ಶ್ವಾನ ಪ್ರೇಮದ ಭಾವುಕತೆಯ ಯಾನ

ಬೆಂಗಳೂರು, ಜ 24(ಯುಎನ್‍ಐ) ಮನುಷ್ಯ ಹಾಗೂ ಶ್ವಾನದ ನಡುವಿನ ಅವಿನಾಭಾವ ಸಂಬಂಧವನ್ನು ಸಾರುವ ‘ನಾನು ಮತ್ತು ಗುಂಡ’ ಶುಕ್ರವಾರ ಬಿಡುಗಡೆಯಾಗಿದ್ದು, ಗುಂಡನ ಪಾತ್ರದಲ್ಲಿ ಶ್ವಾನ ಸಿಂಭಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾನೆ

ಆಟೋ ಶಂಕರನ ಪಾತ್ರದಲ್ಲಿ ಶಿವರಾಜ್ ಕೆ ಆರ್ ಪೇಟೆ, ಗೆಳೆಯನಾಗಿ ಗೋವಿಂದೇಗೌಡ ಹಾಗೂ ಗೃಹಿಣಿಯಾಗಿ ಸಂಯುಕ್ತ ಹೊರನಾಡು ಪ್ರಮುಖ ಪಾತ್ರದಲ್ಲಿದ್ದಾರೆ

ಶ್ವಾನ ಪ್ರೇಮಕ್ಕೆ ಸಂಬಂಧಿಸಿ ಈಗಾಗಲೇ ಹಲವು ಚಿತ್ರಗಳು ತೆರೆಕಂಡಿವೆಯಾದರೂ, ನಾನು ಮತ್ತು ಗುಂಡ ಇಂದಿನ ಕಾಲಘಟಕ್ಕೆ ಹೊಂದಿಕೊಂಡಿದ್ದು, ಬೌ ಬೌ ಬಿರಿಯಾನಿಗಾಗಿ ಮೂಕ ಶ್ವಾನಗಳ ಮಾರಣ ಹೋಮದ ಬಗ್ಗೆಯೂ ಕೊಂಚ ಬೆಳಕು ಚೆಲ್ಲಿದೆ

ಆಕಸ್ಮಿಕವಾಗಿ ಸಿಗುವ ಗುಂಡನನ್ನು ಬಿಟ್ಟಿರಲಾರದಷ್ಟು ಹೊಂದಿಕೊಳ್ಳುವ ಆಟೋ ಶಂಕರ್, ಅದನ್ನು ಕಳೆದುಕೊಂಡಾಗ ಅನುಭವಿಸುವ ನೋವನ್ನು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಮನೋಜ್ಞವಾಗಿ ಚಿತ್ರಿಸಿದ್ದಾರೆ

ಗುಂಡ ಹಾಗೂ ಶಂಕರನ ಸಮಗ್ರ ಕಥೆ ಹಾಗೂ, ಕೊನೆಗೆ ಇಬ್ಬರ ಬಾಂಧವ್ಯ ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ತಿಳಿಯಬೇಕಾದರೆ ಸಿನಿಮಾ ನೋಡಬೇಕು, ಗುಂಡನಾಗಿ ಶ್ವಾನ ಸಿಂಭಾ ಪಾತ್ರವನ್ನು ಕಣ್ತುಂಬಿಕೊಳ್ಳಬೇಕು.

ಯುಎನ್‍ಐ ಎಸ್‍ಎ ವಿಎನ್ 2120
More News
’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

’99 ಲಕ್ಷಕ್ಕೊಬ್ಬ’ ಪ್ರಥಮ್ ಹೊಸ ಚಿತ್ರದ ಟೈಟಲ್ ಲಾಂಚ್

27 Feb 2020 | 9:00 PM

ಬೆಂಗಳೂರು, ಫೆ 27 (ಯುಎನ್‍ಐ) ಬಿಗ್ ಬಾಸ್ ವಿನ್ನರ್ ಪ್ರಥಮ್ ಅಭಿನಯದ ಹೈ ವೋಲ್ಟೇಜ್ ಕಾಮಿಡಿ ಹಾರರ್ ‘ನಟ ಭಯಂಕರ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಪರೀಕ್ಷೆಗಳು ಮುಗಿದ ನಂತರ ರಿಲೀಸ್ ಆಗಲಿದೆ

 Sharesee more..
‘ಎಂಆರ್ ಪಿ  ಚಿತ್ರದ ತುಣುಕು-ಹಾಸ್ಯದ ಮಿಣುಕು

‘ಎಂಆರ್ ಪಿ ಚಿತ್ರದ ತುಣುಕು-ಹಾಸ್ಯದ ಮಿಣುಕು

26 Feb 2020 | 10:25 PM

ಬೆಂಗಳೂರು, ಫೆ 26 (ಯುಎನ್‍ಐ) ಹಾಸ್ಯ ಲೇಪನದೊಡನೆ ಸಂದೇಶವನ್ನೂ ಒಳಗೊಂಡಿರುವ ಮನರಂಜನಾತ್ಮಕ ಚಿತ್ರ ‘ಎಂಆರ್‍ಪಿ’ ಯ ಟ್ರೇಲರ್ ಬಿಡುಗಡೆಯಾಗಿದೆ

 Sharesee more..