Monday, Jun 1 2020 | Time 02:51 Hrs(IST)
International Share

ಸಿಂಗಾಪುರದಲ್ಲಿ ಮತ್ತೆ 642 ಕೊರೊನಾ ಸೋಂಕು ಪ್ರಕರಣ

ಸಿಂಗಾಪುರ, ಮೇ 23 (ಕ್ಸಿನ್ಹುವಾ) ಸಿಂಗಾಪುರದಲ್ಲಿ ಶನಿವಾರ 642 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 31,068 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಹೊಸ ಪ್ರಕರಣಗಳ ಪೈಕಿ ಶೇ 99 ರಷ್ಟು ಜನರಿಗೆ ಸಮುದಾಯ ಸೋಂಕು ಹರಡಿರುವ ಸಾಧ್ಯತೆ ಇದ್ದು ಉಳಿದವರು ಸೋಂಕಿತರ ಸಂಪರ್ಕ ಹೊಂದಿದವರಾಗಿದ್ದಾರೆ.

ಸರಾಸರಿ ಐದು ಪ್ರಕರಣಗಳಂತೆ ಪ್ರತಿ ದಿನ ಸಮುದಾಯ ಆಧಾರಿತ ಸೋಂಕು ಪ್ರಕರಣಗಳು ಹೆಚ್ಚಳವಾಗಿದ್ದು ಇದೀಗ ದಿನಕ್ಕೆ ಸರಾಸರಿ ಏಳು ಪ್ರಕರಣಗಳು ವರದಿಯಾಗುತ್ತಿದೆ.
ಸದ್ಯ 927 ಜನರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ವಾಪಸಾಗಿದ್ದಾರೆ. ಒಟ್ಟು 13,882 ಜನರು ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆ ಅಥವಾ ಪ್ರತ್ಯೇಕವಾಗಿರಿಸಿದ್ದ ಸ್ಥಳಗಳಿಂದ ವಾಪಸಾಗಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸದ್ಯ 711 ಜನರು ಆಸ್ಪತ್ರೆಗಳಲ್ಲಿದ್ದು ಬಹುತೇಕರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಎಂಟು ಜನರ ಸ್ಥಿತಿ ಗಂಭೀರವಾಗಿದ್ದು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿನ ಅಲ್ಪ ಲಕ್ಷಣಗಳಿರುವ 16,452 ಜನರನ್ನು ಪ್ರತ್ಯೇಕವಾಗಿರಿಸಿ ನಿಗಾ ವಹಿಸಲಾಗಿದೆ. ಕೋವಿಡ್ – 19 ರಿಂದ ಒಟ್ಟು 23 ಜನರು ಸಾವನ್ನಪ್ಪಿದ್ದಾರೆ.
ಯುಎನ್ಐ ಜಿಎಸ್ಆರ್ 2238
More News
ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೂ ಹೆಚ್ಚು

31 May 2020 | 6:08 PM

ನವದೆಹಲಿ, ಮೇ 31 (ಯುಎನ್ಐ)- ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ವಿಶ್ವದಲ್ಲಿ 60 ಲಕ್ಷದಾಟಿದ್ದು, 3.64 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.

 Sharesee more..
ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

ಜಿ7ಗೆ ಭಾರತವನ್ನೂ ಸೇರಿಸಬೇಕು; ಟ್ರಂಪ್

31 May 2020 | 5:31 PM

ವಾಷಿಂಗ್ಟನ್ /ನವದೆಹಲಿ, ಮೇ 31 (ಯುಎನ್ಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ನಡೆಯಬೇಕಿದ್ದ ಜಿ7 ಶೃಂಗ ಸಭೆಯನ್ನು ಮುಂದೂಡಿದ್ದು, ಅದನ್ನು 'ಔಟ್ ಡೇಟೆಟ್' ಎಂದು ಕರೆದಿದ್ದಾರೆ. ಜೊತೆಗೆ, ಜಿ 7 ತಂಡದಲ್ಲಿ ಭಾರತ, ಆಸ್ಟ್ರೇಲಿಯಾ, ರಷ್ಯಾ ಮತ್ತು ದಕ್ಷಿಣ ಕೊರಿಯಾವನ್ನು ಸೇರಿಸಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.

 Sharesee more..